2018ರ ಚುನಾವಣೆಗೆ ಜೆಡಿಎಸ್‍ ಗೇಮ್ ಪ್ಲಾನ್ : ಫೆ.10ಕ್ಕೆ ಬೃಹತ್ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Devegowda-01ಬೆಂಗಳೂರು, ಫೆ.5- ಮುಂದಿನ 2018ರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇದೇ 10ರಂದು ನಗರದ ಅರಮನೆ ಮೈದಾನದಲ್ಲಿ ಪಕ್ಷದ ಬೃಹತ್ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಪಂ, ತಾಪಂ, ಜಿಪಂ ಸದಸ್ಯರು, ಪಕ್ಷದ ಬಿಬಿಎಂಪಿ ಸದಸ್ಯರು, ಹಾಲಿ ಶಾಸಕರು, ವಿಧಾನಪರಿಷತ್ ಸದಸ್ಯರು ರಾಜ್ಯಾದ್ಯಂತ ಇರುವ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಫೆ.10ರಂದು ನಡೆಯಲಿರುವ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಗೌಡರು, ಇಂತಹವರು ಇಂತಹದ್ದೇ ಕ್ಷೇತ್ರಕ್ಕೆ ಎಂದು ಅವರವರಿಗೆ ಸೂಚಿಸಲಾಗುತ್ತದೆ. ಅವರು ಆಯಾ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಪಕ್ಷದ ಸಂಸದೀಯ ಮಂಡಳಿ, ರಾಜಕೀಯ ವ್ಯವಹಾರಗಳ ಸಮಿತಿ ಸೇರಿದಂತೆ ಹಲವು ಸಮಿತಿಗಳನ್ನು ರಚನೆ ಮಾಡಲಾಗುತ್ತದೆ ಎಂದು ತಿಳಿಸಿದರು.  ರಾಜ್ಯಾದ್ಯಂತ ನಾನು ಪ್ರವಾಸ ಕೈಗೊಳ್ಳುತ್ತೇನೆ. ಪಕ್ಷದ ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿ ಮುಂದಿನ ವಿಧಾನಸಭೆ ಚುನಾವಣೆಯನ್ನು ಎದುರಿಸಲು ಸಿದ್ದಪಡಿಸಲಾಗುವುದು ಎಂದರು.

ಒಟ್ಟಾರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಹೆಚ್ಚು ಸ್ಥಾನಗಳಿಸುವುದು ನಮ್ಮ ಗುರಿ ಎಂದು ಗೌಡರು ಇದೇ ವೇಳೆ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin