ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಪ್ರಕರಣ : 28 ಜನರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Gadag--1

ಗದಗ,ಫೆ.6– ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 28 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ನಿನ್ನೆ ಲಕ್ಷ್ಮೇಶ್ವರದಲ್ಲಿ ನಡೆದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಉದ್ರಿಕ್ತರ ಗುಂಪು ಠಾಣೆಗೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದು , ಇಂದು ಮಧ್ಯಾಹ್ನದವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 28 ಜನರನ್ನು ಬಂಧಿಸಿದ್ದು , ಐದು ದೂರುಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. [ ಲಾಕಪ್ ಡೆತ್ : ಉದ್ರಿಕ್ತರಿಂದ ಪೊಲೀಸ್ ಠಾಣೆ, ವಾಹನಗಳಿಗೆ ಬೆಂಕಿ, ಲಕ್ಷ್ಮೇಶ್ವರ ಉದ್ವಿಗ್ನ ]

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin