ಖಾಲಿಯಿದ್ದ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮನೆ ಭಾಗಶಃ ಸುಟ್ಟು ಭಸ್ಮವಾಗಿರುವ ಘಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಫೆ.6- ಖಾಲಿಯಿದ್ದ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮನೆ ಭಾಗಶಃ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ರಾಮಾನುಜ ರಸ್ತೆಯಲ್ಲಿರುವ ಗೌರಮ್ಮ ಎಂಬುವರಿಗೆ ಸೇರಿದ್ದ ಮನೆಯು ಖಾಲಿ ಇದ್ದು, ಮನೆಯ ಸುತ್ತಮುತ್ತ ಕಸವನ್ನು ಹಾಕಲಾಗಿತ್ತು. ಕಸಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮನೆಯು ಭಾಗಶಃ ಸುಟ್ಟು ಹೋಗಿದೆ. ಮನೆಯಲ್ಲಿ ಯಾರೂ ಇಲ್ಲದೇ ಇದ್ದುದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಅಗ್ನಿ ಶಾಮಕದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈ ಸಂಬಂಧ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin