ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ, ಸ್ಥಳದಲ್ಲೇ ಸಾವನ್ನಪ್ಪಿದ ಚಾಲಕ

ಈ ಸುದ್ದಿಯನ್ನು ಶೇರ್ ಮಾಡಿ

Tractor--01

ತುರುವೇಕೆರೆ, ಫೆ.7- ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ರಾಯಸಂದ್ರ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕು ಕೊಪ್ಪ ಗ್ರಾಮದ ನಿವಾಸಿ ಮಂಜುನಾಥ್ (30) ಮೃತಪಟ್ಟಿರುವ ಟ್ರ್ಯಾಕ್ಟರ್ ಚಾಲಕ.  ಕಳೆದ ರಾತ್ರಿ ತನ್ನ ಹೆಂಡತಿ ಊರಾದ ಮಾಚೇನಹಳ್ಳಿಗೆ ಟ್ರ್ಯಾಕ್ಟರ್‍ನಲ್ಲಿ ತೆರಳುತ್ತಿದ್ದಾಗ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಇಂಜಿನ್ ಮಂಜುನಾಥನ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮತ್ತೊಂದು ಟ್ರ್ಯಾಕ್ಟರ್‍ನ ಸಹಾಯದಿಂದ ಇಂಜಿನ್‍ನನ್ನು ಪಕ್ಕಕ್ಕೆ ಎಳೆದು ಮೃತ ದೇಹವನ್ನು ಹೊರ ತೆಗೆಯಲಾಯಿತು. ಈ ಸಂಬಂಧ ದಂಡಿನಶಿವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin