ರೈತ ವಿರೋಧಿ ಧೋರಣೆ ಕೈಬಿಟ್ಟು ಸಾಲ ಮನ್ನಾ ಮಾಡಿ

ಈ ಸುದ್ದಿಯನ್ನು ಶೇರ್ ಮಾಡಿ

BELURU

ಬೇಲೂರು, ಫೆ.7- ರೈತರ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಹಾಗೂ ಬೆಳೆ ಪರಿಹಾರ ನೀಡದೆ ರೈತ ವಿರೋಧಿ ಧೋರಣೆ ಕೈಬಿಟ್ಟು ತಕ್ಷಣವೆ ರೈತರ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‍ಗೆ ಮನವಿ ಸಲ್ಲಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಭೋಗ ಮಲ್ಲೇಶ್ ಮಾತನಾಡಿ, ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಸತತ ಬರಗಾಲದಿಂದ ರೈತರು ಪರದಾಡುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಉಡಾಫೆಯಿಂದ ವರ್ತಿಸುತ್ತಿವೆ. ರೈತರ ಸಾಲಮನ್ನಾ ಮಾಡುವುದಕ್ಕೆ ಒಬ್ಬರ ಮೇಲೆ ಒಬ್ಬರು ಆರೋಪ ಮಾಡುತ್ತಾ ರೈತರಿಗೆ ಅನ್ಯಾಯವೆಸಗುತ್ತಿದ್ದಾರೆ ಎಂದು ದೂರಿದರು.

ಮುಂದಿನ ಅಧಿವೇಶನದೊಳಗೆ ರಾಜ್ಯ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಕೃಷಿ ಸಾಲವನ್ನು ಮನ್ನಾಮಾಡಿ, ಮುಂಗಾರು ಮಳೆಯೊಳಗೆ ರೈತರಿಗೆ ಹೊಸಸಾಲನೀಡಬೇಕು ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ರೈತ ಸಂಘದಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಮಾತನಾಡಿ, ಬರಗಾಲವಿದ್ದರೂ ತಾಲೂಕಿನಲ್ಲಿ ಇನ್ನೂ ಗೋಶಾಲೆ ತೆರೆಯದೆ ಗೋವುಗಳ ಸಾವಿಗೆ ಸರ್ಕಾರ ಕಾರಣವಾಗುತ್ತಿದೆ. ಈ ವರ್ಷದ ಬೆಳೆ ಮತ್ತು ಬರ ಪರಿಹಾರದ ಹಣವನ್ನು ವಿತರಿಸಲು ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದ್ದು, ಶೀಘ್ರವೆ ಕಾರ್ಯನೀತಿ ರೂಪಿಸಿ ಪರಿಹಾರದ ಹಣವನ್ನು ವಿತರಿಸಬೇಕು. ಮತ್ತು ಜಾನುವಾರುಗಳಿಗೆ ನೀರು ಮತ್ತು ಮೇವನ್ನು ವಿತರಿಸುವಂತಹ ಕೆಲಸವನ್ನು ಶೀಘ್ರವೆ ಮಾಡಬೇಕು ಇಲ್ಲದಿದ್ದಲ್ಲಿ ತಹಸೀಲ್ದಾರ್ ಕಚೇರಿಗೆ ಬೀಗಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಗೌರವಾಧ್ಯಕ್ಷ ಬಸವೇಗೌಡ, ಅಧ್ಯಕ್ಷ ಚನ್ನೇಗೌಡ, ಪ್ರಧಾನ ಕಾರ್ಯದರ್ಶಿ ಬಸವರಾಜು, ಶಿವಪ್ಪ ಇನ್ನಿತರರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin