ನಾಳೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ಧೂರಿ ತೆರೆ

ಈ ಸುದ್ದಿಯನ್ನು ಶೇರ್ ಮಾಡಿ

mysuru

ಮೈಸೂರು, ಫೆ.8- ಒಂಬತ್ತನೆ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಾಳೆ ತೆರೆ ಬೀಳಲಿದ್ದು, ಇದಕ್ಕಾಗಿ ಅರಮನೆ ನವ ವಧುವಿನಂತೆ ಸಿಂಗಾರಗೊಂಡಿದೆ.
ಅರಮನೆ ಆವರಣದಲ್ಲಿ ವಿಜಯನಗರ ಸಾಮ್ರಾಜ್ಯ ವೈಭವವನ್ನು ಕಣ್ಣಿಗೆ ಕಟ್ಟುವಂತೆ ಮಾಡಲು ವಿಶಾಲವಾದ ವೇದಿಕೆ ಸಿದ್ಧವಾಗುತ್ತಿದೆ.ಜಗತ್‍ಪ್ರಸಿದ್ಧ ಹಂಪಿಯ ವಿಠ್ಠಲ ದೇವಾಲಯ ಮಾದರಿ ಸಂಗೀತ ಸ್ತಂಭಗಳನ್ನು ನಿಲ್ಲಿಸಲಾಗಿದೆ. 72ಗಿ 60 ಅಡಿ ವಿಸ್ತೀರ್ಣ, 4 ಅಡಿ ಎತ್ತರದ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ.ಈ ಸಮಾರಂಭವನ್ನು ಸಾರ್ವಜನಿಕರು ವೀಕ್ಷಿಸಲು ನಾಲ್ಕು ಕಡೆ ಬೃಹತ್ ಎಲ್‍ಇಡಿ ವಿಡಿಯೋ ಪರದೆಗಳನ್ನು ಅಳವಡಿಸಲಾಗಿದೆ.

ಎಂಟು ಸಾವಿರಕ್ಕೂ ಹೆಚ್ಚು ಮಂದಿ ಪ್ರೇಕ್ಷಕರು ಆಗಮಿಸಲಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ವಿಶುಕುಮಾರ್ ಈ ಸಂಜೆಗೆ ತಿಳಿಸಿದ್ದಾರೆ.  ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ವಜುಭಯಿ ರೂಢಾಬಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಅರಮನೆ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.ಈ ಸಮಾರಂಭದಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಹಾಗೂ ಖ್ಯಾತ ನೃತ್ಯ ಕಲಾವಿದೆ ನಿರುಪಮಾ ರಾಜೇಂದ್ರ ತಂಡದವರಿಂದ ನೃತ್ಯರೂಪಕ ಹಾಗೂ ಚಲನಚಿತ್ರ ಕಲಾವಿದರಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin