ಸಚಿವ ದೇಶಪಾಂಡೆಗೆ ವಿಧಾನಸಭಾಧ್ಯಕ್ಷ ಕೋಳಿವಾಡ ತರಾಟೆ

ಈ ಸುದ್ದಿಯನ್ನು ಶೇರ್ ಮಾಡಿ

KB

ಬೆಂಗಳೂರು, ಫೆ.8- ಶಾಸಕರ ಪ್ರಶ್ನೆಗಳಿಗೆ ನಿಗದಿತ ಅವಧಿಯಲ್ಲಿ ಉತ್ತರ ನೀಡದ ಅಧಿಕಾರಿಗಳು ಮತ್ತು ಸಚಿವರ ವಿರುದ್ಧ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಇಂದೂ ಕೂಡ ಆಕ್ರೋಶ ವ್ಯಕ್ತಪಡಿಸಿದರು.  ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ನಂತರ ಚುಕ್ಕೆ ಗುರುತಿನ 154   ಪ್ರಶ್ನೆಗಳ ಪೈಕಿ 60 ಪ್ರಶ್ನೆಗಳಿಗೆ ಮಾತ್ರ ಉತ್ತರ ಮಂಡಿಸಿದ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಕೋಳಿವಾಡ ತರಾಟೆಗೆ ತೆಗೆದುಕೊಂಡರು.  ಒಂದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಸ್ಪೀಕರ್ ಹೇಳುತ್ತಿದ್ದಾರೆ ದೇಶಪಾಂಡೆ ಅವರು ಬೇಷರತ್ ಕ್ಷಮೆ ಕೇಳಿದರು. ಉತ್ತರ ವಿಳಂಬವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಎಲ್ಲಾ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.

ಇದಕ್ಕೂ ಮುನ್ನ ಪ್ರಶ್ನೋತ್ತರ ಅವಯಲ್ಲಿ ವೈ.ಎ.ನಾರಾಯಣಸ್ವಾಮಿ ಅವರು ಶಿಕ್ಷಕರ ವೇತನ ಬಗ್ಗೆ ಪ್ರಶ್ನೆ ಕೇಳಿದರು. ಅದಕ್ಕೆ ಉತ್ತರ ಸಿದ್ಧವಾಗಿಲ್ಲ ಎಂಬ ಮಾಹಿತಿ ವಿಧಾನಸಭಾಧ್ಯಕ್ಷರನ್ನು ಕೆರಳಿಸಿತು.  ಇದು ನಾಚಿಕೆ ಪಡಬೇಕಾದ ವಿಷಯ. ಸಣ್ಣ ಸಣ್ಣ ಪ್ರಶ್ನೆಗಳಿಗೂ ಉತ್ತರ ನೀಡಲಾಗುವುದಿಲ್ಲ ಎಂದರೆ ಏನು ಹೇಳುವುದು ಎಂದು ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು.  ಇನ್ನು ಮುಂದೆ ಯಾವುದೇ ಕಾರಣಕ್ಕೂ ಕ್ಷಮೆ ನೀಡುವುದಿಲ್ಲ. ತಕ್ಷಣ ಉತ್ತರ ನೀಡಿ. ಪ್ರಶ್ನೋತ್ತರ ಅವಯ ಕೆಲವೇ ನಿಮಿಷಗಳ ಮೊದಲು ಉತ್ತರ ಕಳುಹಿಸುವ ಪರಿಪಾಠ ಬಿಡಿ ಎಂದು ಸೂಚನೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin