ಜೀವನದಲ್ಲಿ ಜಿಗುಪ್ಸೆಗೊಂಡು ಬೇಕರಿ ಮಾಲೀಕನೊಬ್ಬ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಮದ್ದೂರು,ಫೆ.9-ಜೀವನದಲ್ಲಿ ಜಿಗುಪ್ಸೆಗೊಂಡು ಬೇಕರಿ ಮಾಲೀಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ನವೀನ್(37) ಮೃತಪಟ್ಟ ವ್ಯಕ್ತಿ.ಪಟ್ಟಣದಲ್ಲಿ ಹಲವು ವರ್ಷಗಳಿಂದ ಬೇಕರಿ ನಡೆಸುತ್ತಿದ್ದ ನವೀನ್ ಕುಟುಂಬ ಸಮೇತ ಇಲ್ಲೇ ವಾಸವಾಗಿದ್ದರು. ಇತ್ತೀಚೆಗೆ ಮಾನಸಿಕ ಖಿನ್ನತೆಗೊಳಗಾಗಿದ್ದ ಇವರು ನಿನ್ನೆ ಮದ್ಯಸೇವಿಸಿ ಮನೆಗೆ ಬಂದು ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin