ಪಿಡಿಒ ವರ್ತನೆ ಖಂಡಿಸಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

tumakuru
ತುಮಕೂರು, ಫೆ.9- ದಲಿತರ ಕಾಲೋನಿಗೆ ಭೇಟಿ ನೀಡದೆ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಚಿಕ್ಕತೊಟ್ಲು ಕೆರೆ ಗ್ರಾಪಂ ಪಿಡಿಒ ಅವರ ವರ್ತನೆ ಖಂಡಿಸಿ ಗ್ರಾಪಂ ಸದಸ್ಯರು, ಸಾರ್ವಜನಿಕರು ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.ಗ್ರಾಮಾಂತರದ ಚಿಕ್ಕತೋಟ್ಲುಕೆರೆಯ ಗ್ರಾಪಂನ ಅಭಿವೃದ್ಧಿ ಅಧಿಕಾರಿ ಮಂಜುಳಾ ದಲಿತ ಕಾಲೋನಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿಲ್ಲ. ಅಲ್ಲದೆ, ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡುವಲ್ಲಿಯೂ ದಲಿತರ ಕಾಲೋನಿಗಳನ್ನು ಕಡೆಗಣಿಸುತ್ತಿದ್ದು, ಕೂಡಲೇ ಅವರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಮಾತನಾಡಿ, ಪಿಡಿಒ ಮಂಜುಳಾ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಗಮನಹರಿಸದೆ ಸದಸ್ಯರಿಗೆ ಕಾಮಗಾರಿ ನೀಡದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಗ್ರಾಪಂ ಸದಸ್ಯರಿಗೆ ಗೌರವ ನೀಡದೆ ವರ್ತಿಸುತ್ತಿದ್ದಾರೆ. ಆದ್ದರಿಂದ ಇವರನ್ನು ಕೂಡಲೇ ವರ್ಗಾಯಿಸಿ ಬೇರೆ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸಬೇಕೆಂದು ಆಗ್ರಹಿಸಿದರು. ವಿಷಯ ತಿಳಿದು ಸ್ಥಳಕ್ಕೆ ಪಿಡಿಒ ಬಾರದ ಹಿನ್ನೆಲೆಯಲ್ಲಿ ಕಚೇರಿಯ ಪೀಠೋಪಕರಣಗಳನ್ನು ಧ್ವಂಸ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಸ್ಥಳಕ್ಕೆ ತಾಪಂ ಸಹಾಯಕ ನಿರ್ದೇಶಕ ರಮೇಶ್ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿ ಗ್ರಾಪಂ ಕಚೇರಿ ಬೀಗ ತೆಗೆಸಿ, ಪಿಡಿಒ ಅವರ ವಿರುದ್ಧ ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin