ಬಾಲಕರ ವಸತಿ ನಿಲಯ ಶೀಘ್ರ ಸ್ಥಳಾಂತರ

ಈ ಸುದ್ದಿಯನ್ನು ಶೇರ್ ಮಾಡಿ

beluru

ಬೇಲೂರು, ಫೆ.9- ಮೂಲಸೌಲಭ್ಯಗಳಿಂದ ವಂಚಿತವಾಗಿರುವ ಪಟ್ಟಣದ ಕೆಂಪೇಗೌಡ ರಸ್ತೆಯಲ್ಲಿರುವ ಕಾಲೇಜು ಬಾಲಕರ ವಸತಿ ನಿಲಯವನ್ನು ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಹಾಸನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುರುಶೋತ್ತಮ್ ಭರವಸೆ ನೀಡಿದ್ದಾರೆ.ಪಟ್ಟಣದ ವಿವಿಧ ವಸತಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ನಿಯಲಯಗಳಲ್ಲಿ ಸ್ವಚ್ಛತೆ ಕಾಪಾಡದ ಹಿನ್ನೆಲೆಯಲ್ಲಿ ಸಿಬ್ಬಂದಿ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈಗಾಗಲೆ ಪಟ್ಟಣದ ಕೇಂಪೇಗೌಡ ವೃತ್ತದಲ್ಲಿರುವ ಕಾಲೇಜು ಬಾಲಕರ ವಸತಿ ನಿಲಯದಲ್ಲಿ ಸರಿಯಾದ ಶೌಚಾಲಯವಿಲ್ಲ. ನೀರಿನ ವ್ಯವಸ್ಥೆ, ಕಿಟಕಿ ಬಾಗಿಲುಗಳು ಸರಿಯಾಗಿ ಇಲ್ಲದಿರುವುದರಿಂದ ಕಟ್ಟಡದ ಮಾಲೀಕರಿಗೆ ನೋಟೀಸ್ ನೀಡಿ ತಕ್ಷಣವೆ ಉತ್ತಮ ಸೌಕರ್ಯವಿರುವ ಕಟ್ಟಡಕ್ಕೆ ಬದಲಾಯಿಸಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಡಾ.ಶ್ರೀಧರ್, ವಸತಿ ನಿಲಯಗಳ ವಾರ್ಡ್‍ನ್‍ಗಳಾದ ಪುಟ್ಟರಾಜು, ಸಂತೋಷ್ ಇದ್ದರು.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin