ವಿಧಾನ ಪರಿಷತ್ ಸದಸ್ಯರಾಗಿ ರಮೇಶ್‍ಬಾಬು ಅಧಿಕಾರ ಸ್ವೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

Ramesh-Babu

ಬೆಂಗಳೂರು, ಫೆ.9– ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಜೆಡಿಎಸ್‍ನ ರಮೇಶ್ ಬಾಬು ಇಂದು ವಿಧಾನ ಪರಿಷತ್ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದರು. ವಿಧಾನ ಪರಿಷತ್‍ನ ಕಾರ್ಯದರ್ಶಿಯವರು ರಮೇಶ್ ಬಾಬು ಅವರಿಗೆ ಪ್ರಮಾಣ ವಚನ ಬೋಧಿಸಿದರು. ಬಾಬು ಭಗವಂತನ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.  ಬಳಿಕ ಸಭಾಪತಿ ಡಿ.ಎಚ್.ಶಂಕರಮೂರ್ತಿಯವರು ರಮೇಶ್ ಬಾಬು ಅವರನ್ನು ಅಭಿನಂದಿಸಿದರು. ಅಧಿಕಾರ ಸ್ವೀಕಾರದ ಬಳಿಕ ರಮೇಶ್ ಬಾಬು ಮುಖ್ಯಮಂತ್ರಿ ಅವರ ಆಸನದ ಬಳಿ ತೆರಳಿದಾಗ ಮುಖ್ಯಮಂತ್ರಿಯವರು ರಮೇಶ್ ಬಾಬು ಅವರ ಕೆನ್ನೆ ಸವರಿ ಅಭಿನಂದಿಸಿದರು.

ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಜೆ. ಜಾರ್ಜ್, ಟಿ.ಬಿ.ಜಯಚಂದ್ರ, ರೋಷನ್ ಬೇಗ್, ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ, ಗಣೇಶ್ ಕಾರ್ಣಿಕ್, ಬಸವರಾಜ ಹೊರಟ್ಟಿ ಸೇರಿದಂತೆ ಎಲ್ಲ ಸದಸ್ಯರು ಅವರನ್ನು ಅಭಿನಂದಿಸಿದರು.

ಸಭಾಪತಿ ಆಕ್ಷೇಪ:’

ರಮೇಶ್‍ಬಾಬು ಅವರು ಪ್ರಮಾಣ ವಚನ ಸ್ವೀಕರಿಸುವಾಗ ಭಗವಂತ ಹಾಗು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದಾಗ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮಧ್ಯದಲ್ಲೇ ಆಕ್ಷೇಪ ವ್ಯಕ್ತಪಡಿಸಿ, ವ್ಯಕ್ತಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಬಾರದು. ಇದಕ್ಕೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿಲ್ಲ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin