ಸಿಎಂ ಸಿದ್ದರಾಮಯ್ಯ ತವರಲ್ಲಿ ಬೀದಿ ನಾಯಿಗಳ ಹಾವಳಿ

ಈ ಸುದ್ದಿಯನ್ನು ಶೇರ್ ಮಾಡಿ

dogs

ಮೈಸೂರು, ಫೆ.9-ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರವಾದ ವರುಣಾದಲ್ಲಿ ಬೀದಿನಾಯಿಗಳ ಹಾವಳಿಯಿಂದ ಆರು ಮಂದಿ ಗಾಯಗೊಂಡಿದ್ದಾರೆ.ಇಲ್ಲಿನ ದಂಡಿಕೆರೆ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಾಯಿಗಳ ಹಿಂಡೊಂದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಸಾರ್ವಜನಿಕರ ಮೇಲೆ ದಾಳಿ ನಡೆಸಿದೆ.ದಾಳಿಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಮಹದೇವ, ಶಿವಯ್ಯ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಈಗಾಗಲೇ ಹಲವಾರು ಗ್ರಾ.ಪಂ. ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದುದರಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin