ಸೆಲ್ವಂ ನಂತರ ರಾಜ್ಯಪಾಲರನ್ನು ಭೇಟಿ ಮಾಡಿದ ಶಶಿಕಲಾ, ಸರ್ಕಾರ ರಚನೆಯ ಹಕ್ಕು ಮಂಡನೆ

ಈ ಸುದ್ದಿಯನ್ನು ಶೇರ್ ಮಾಡಿ

Sasikala

ಚೆನ್ನೈ. ಫೆ. 09 : ತಮಿಳುನಾಡಿನ ರಾಜಕಾರಣ ಕುತೂಹಲ ಘಟ್ಟ ತಲುಪಿದ್ದು ಇಂದು ಸಂಜೆ 7ಗಂಟೆಯ ಸುಮಾರಿಗೆ ತಮ್ಮ 9 ಬೆಂಬಲಿಗ ಸಚಿವ ಹಾಗೂ ಶಾಸಕರೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಜಿತ ಮುಖ್ಯಮಂತ್ರಿ ಶಶಿಕಲಾ ಅವರು, ತಮಗೆ 129 ಶಾಸಕರ ಬೆಂಬಲವಿರುವ ಪಟ್ಟಿಯನ್ನು ರಾಜ್ಯಪಾಲ ಸಿ.ಎಚ್.ವಿದ್ಯಾಸಾಗರ್ ರಾವ್ ಅವರಿಗೆ ನೀಡಿ ನೀಡಿ ನೂತನ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ತಮ್ಮ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದಲ್ಲಿ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದ್ದು, ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ತಮ್ಮ ಪರವಾಗಿ ಬರುವ ಸಾಧ್ಯತೆ ಇದೆ.   ಹೀಗಾಗಿ ನೂತನ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಶಶಿಕಲಾ ರಾಜ್ಯಪಾಲರಿಗೆ ವಿವರಣೆ ನೀಡಿದ್ದಾರೆ. ಇದಕ್ಕು ಮುನ್ನ ಶಶಿಕಲಾ ಅವರು ಚೆನ್ನೈನ ಮರೀನಾ ಬೀಚ್ ನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಸಮಾಧಿಗೆ ತೆರಳಿ ವಂದನೆ ಸಲ್ಲಿಸಿದರು.

ಇದಕ್ಕೂ ಮೊದಲು ತಮಿಳುನಾಡು ಹಂಗಾಮಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರು ರ ರಾಜ್ಯಪಾಲ ಸಿಎಚ್ ವಿದ್ಯಾಸಾಗರ್ ರಾವ್ ಅವರನ್ನು ಭೇಟಿ ಮಾಡಿ, ತಾವು ರಾಜಿನಾಮೆಯನ್ನು ಹಿಂಪಡೆಯಲು ಬಯಸಿರುವುದಾಗಿ ತಿಳಿಸಿದ್ದಾರೆ.  ಸಂಜೆ 5 ಗಂಟೆ ಸುಮಾರಿಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಪನ್ನೀರ್ ಸೆಲ್ವಂ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ನನ್ನ ಮೇಲೆ ಒತ್ತಡ ಹೇರಲಾಗಿತ್ತು. ಹೀಗಾಗಿ ರಾಜಿನಾಮೆ ನೀಡಿದ್ದು, ಈಗ ಅದನ್ನು ಹಿಂಪಡೆಯಲು ಬಯಸಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.  ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪನ್ನೀರ್ ಸೆಲ್ವಂ ಅವರು, ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರಿಗೆ ವಿವರಿಸಿದ್ದು, ಧರ್ಮಕ್ಕೆ ಜಯ ಸಿಕ್ಕೆ ಸಿಗುತ್ತೇ ಎಂದು ಹೇಳಿದ್ದಾರೆ. ಅಲ್ಲದೆ ರಾಜ್ಯಪಾಲರು ನನಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin