ದೇವೀರಮ್ಮಣ್ಣಿ ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

kr-pete

ಕೆ.ಆರ್.ಪೇಟೆ, ಫೆ.10- ಪಟ್ಟಣದ ದೇವೀರಮ್ಮಣ್ಣಿ ಕೆರೆಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.ಸುಮಾರು 38ರಿಂದ 40ವಯಸ್ಸಿನ ಮಹಿಳೆಯ ಶವವು ಕೆರೆಯಲ್ಲಿ ತೇಲುತ್ತಿರುವುದನ್ನು ಕಂಡ ಸಾರ್ವಜನಿಕರು ಪಟ್ಟಣ ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ತಕ್ಷಣ ಆಗಮಿಸಿದ ಸಬ್‍ಇನ್ಸ್‍ಪೆಕ್ಟರ್ ಅರುಣ್‍ಕುಮಾರ್ ಮತ್ತು ಸಿಬ್ಬಂದಿ ವರ್ಗದವರು, ಅಗ್ನಿಶಾಮಕ ಠಾಣೆಯ ಅಧಿಕಾರಿಗಳ ಸಹಕಾರದೊಂದಿಗೆ ಶವವನ್ನು ನೀರಿನಿಂದ ಮೇಲೆತ್ತಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದಾರೆ. ಅಪರಿಚಿತ ಮಹಿಳೆಯ ಸಾವಿನ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಬಗ್ಗೆ ಪೊಲೀಸರ ತನಿಖೆಯಲ್ಲಿ ಬಯಲಾಗಬೇಕಾಗಿದೆ. ಈಕೆಯ ವಾರಸುದಾರರು ಯಾರಾದರೂ ಇದ್ದಲ್ಲಿ ಪಟ್ಟಣ ಪೊಲೀಸರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin