ಬೈಕ್-ಟಾಟಾಏಸ್ ಮುಖಾಮುಖಿ ಡಿಕ್ಕಿ : ಎಂಜನಿಯರಿಂಗ್ ವಿದ್ಯಾರ್ಥಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಮಳವಳ್ಳಿ, ಫೆ.10- ಬೈಕ್ ಮತ್ತು ಟಾಟಾ ಏಸ್ ಮುಖಾ-ಮುಖಿ ಡಿಕ್ಕಿ ಸಂಭವಿಸಿ ಸವಾರ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಬೆಂಗಳೂರಿನ ಇಂಜನಿಯರಿಂಗ್ ವಿದ್ಯಾರ್ಥಿಗಳಾದ ರಾಹುಲ್ (19) ಹಾಗೂ ನಾಗಾರ್ಜುನ್(19) ಇಬ್ಬರೂ ಹಾನವಾಡಿ ಗ್ರಾಮದ ಸ್ನೇಹಿತನ ಮನೆಗೆ ಹೋಗಿ ಬೈಕ್‍ನಲ್ಲಿ ವಾಪಸ್ ಬೆಂಗಳೂರಿಗೆ ಬರುವಾಗ ತಾಲ್ಲೂಕಿನ ಪೂರಿಗಾಲಿ ಗ್ರಾಮದ ಬಳಿ ಟಾಟಾಏಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ರಾಹುಲ್ ಹಾಗೂ ನಾಗಾರ್ಜುನ್ ತೀವ್ರ ಗಾಯಗೊಂಡಿದ್ದು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ರಾಹುಲ್ ಮೃತಪಟ್ಟಿದ್ದಾನೆ.ನಾಗಾರ್ಜುನ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇವನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಬೆಳಕವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಹುಲ್ ಮರಣೋತ್ತರ ಪರಿಕ್ಷನಡೆಸಿ ಕುಟುಂಬದವರಿಗೆ ನೀಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin