ಆಟೋಗೆ ಎಸ್‍ಆರ್‍ಟಿಸಿ ಬಸ್  ಡಿಕ್ಕಿ : ಐವರು ಮಹಿಳೆಯರು ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ,ಫೆ.13- ಹಿಂಬದಿಯಿಂದ ಬಂದ ಕೆಎಸ್‍ಆರ್‍ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿ ಹೊಡೆದು ಅದರಲ್ಲಿದ್ದ 15ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದು, ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ. ಮೊಳಕಾಲ್ಮೂರು ತಾಲ್ಲೂಕಿನ ಕೊಮ್ಮನಪಟ್ಟಿ ಬಳಿ ಈ ಅಪಘಾತ ಸಂಭವಿಸಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಎಲ್ಲಾ ಗಾಯಾಳುಗಳು ಕೊಣಸಾಗರ ಗ್ರಾಮದವರಾಗಿದ್ದು, ಕೂಲಿಗಾಗಿ ಇಂದು ಬೆಳಗ್ಗೆ ಬಳ್ಳಾರಿಗೆ ಆಟೋದಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಪಲ್ಟಿ ಹೊಡೆದು 15 ಜನರೂ ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin