ವಿದೇಶಗಳಿಗೆ ಕಳ್ಳಸಾಗಣೆ ಮಾಡಲು ಸಂಗ್ರಹಿಸಿದ್ದ 7.90 ಕೋಟಿ ರೂ. ರಕ್ತ ಚಂದನ ವಶ

ಈ ಸುದ್ದಿಯನ್ನು ಶೇರ್ ಮಾಡಿ

Rakta-Chandana

ಬೆಂಗಳೂರು, ಫೆ.13-ವಿದೇಶಗಳಿಗೆ ಕಳ್ಳಸಾಗಣೆ ಮಾಡಲು ಸಂಗ್ರಹಿಸಿಟ್ಟಿದ್ದ 7.90 ಕೋಟಿ ರೂ. ಮೌಲ್ಯದ 4.390ಟನ್ ರಕ್ತ ಚಂದನ ಮರದ ತುಂಡುಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಹಸ್‍ಮುಖ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.  ರಾಮಮೂರ್ತಿ ನಗರ ಠಾಣೆ ವ್ಯಾಪ್ತಿ ಎಫ್‍ಸಿಐ ಗೋದಾಮು ರಸ್ತೆಯಲ್ಲಿನ ಜೈ ಹನುಮಾನ್ ವುಡ್‍ವಕ್ರ್ಸ್ ಮೇಲೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.  ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4.390 ಟನ್ ತೂಕದ 87 ರಕ್ತಚಂದನ ಮರದ ತುಂಡುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.  ಈ ಸಂಬಂಧ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚುವರಿ ಪೊಲೀಸ್ ಆಯುಕ್ತ ರವಿ.ಎಸ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿ ಎಚ್.ಡಿ.ಆನಂದಕುಮಾರ್, ಎಸಿಪಿ ಓಬಳೇಶ್,ï ಇನ್ಸ್‍ಪೆಕ್ಟರ್ ಮಲ್ಲಿಕಾರ್ಜುನ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin