ವ್ಯಾಪಂ ಹಗರಣ : 500 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶ ರದ್ದು

ಈ ಸುದ್ದಿಯನ್ನು ಶೇರ್ ಮಾಡಿ

Vyapam--01

ನವದೆಹಲಿ, ಫೆ.13-ಮಧ್ಯಪ್ರದೇಶದ ಬಹುಕೋಟಿ ವ್ಯಾಪಂ (ವ್ಯವಸಾಯಿಕ್ ಪರೀಕ್ಷಾ ಮಂಡಲ್) ಹಗರಣಕ್ಕೆ ಸಂಬಂಧಪಟ್ಟಂತೆ 500 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ ಇದೇ ಹಗರಣದ ಹಿನ್ನೆಲೆಯಲ್ಲಿ ದೇಶಾದ್ಯಂತ 9.5 ಲಕ್ಷ ವೈದ್ಯಕೀಯ ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿದ ಸಿಬಿಐಗೆ ಅನೇಕ ನಕಲಿ ವಿದ್ಯಾರ್ಥಿಗಳಿರುವುದು ಕಂಡುಬಂದಿದೆ.   ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ನೇತೃತ್ವದ ಪೀಠ ಈ ಪಕರಣದ ವಿಚಾರಣೆ ನಡೆಸಿತು. ಈ ಸಂಬಂಧ ಸಿಬಿಐ ಸಲ್ಲಿಸಲಾಗಿರುವ ಪಟ್ಟಿಯಲ್ಲಿ 500ಕ್ಕೂ ಹೆಚ್ಚು ನಕಲಿ ಎಂಬಿಬಿಎಸ್ ವಿದ್ಯಾರ್ಥಿಗಳಿರುವುದನ್ನು ಮನಗಂಡ ಪೀಠವು ಆ ವಿದ್ಯಾರ್ಥಿಗಳ ಪ್ರವೇಶವನ್ನು ರದ್ದುಗೊಳಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin