ಕಾಶ್ಮೀರದದಲ್ಲಿ ಎನ್‍ಕೌಂಟರ್ : ಮೂವರು ಯೋಧರು ಹುತಾತ್ಮ, ಓರ್ವ ಉಗ್ರನ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Encounter-----0252'

ಶ್ರೀನಗರ, ಫೆ.14-ಕಾಶ್ಮೀರ ಕಣಿವೆಯ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಭಯೋತ್ಪಾದಕರ ಮುಖಂಡನೊಬ್ಬ ಹತನಾಗಿದ್ದಾನೆ. ಉಗ್ರರ ನಿಗ್ರಹ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಎನ್‍ಕೌಂಟರ್‍ನಲ್ಲಿ ಹಲವಾರು ಯೋಧರು ಮತ್ತು ನಾಗರಿಕರು ಗಾಯಗೊಂಡಿದ್ದಾರೆ.   ಉತ್ತರ ಕಾಶ್ಮೀರದ ಹಾಜಿನ್ ಪ್ರದೇಶದ ಪ್ಯಾರೆ ಮೊಹಲ್ಲಾದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಲಷ್ಕರ್-ಇ-ತೊಯ್ಬಾ ಕಮ್ಯಾಂಡರ್ ಹತನಾಗಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರೂ ಹುತಾತ್ಮರಾಗಿದ್ದಾರೆ. ಗಾಯಗೊಂಡ ಯೋಧರು ಮತ್ತು ಸಾರ್ವಜನಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಿರಿಯ ಪೆÇಲೀಸ್ ಆಧಿಕಾರಿಯೊಬ್ಬರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin