ಅಕ್ರಮ ಮರಳು ಅಡ್ಡೆ ಮೇಲೆ ದಾಳಿ : ಓರ್ವನ ಬಂಧನ-ಮೂರು ಲಾರಿ ವಶ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು,ಫೆ.15-ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮೂರು ಮರಳು ಲಾರಿಗಳನ್ನು ವಶಪಡಿಸಿಕೊಂಡಿರುವ ಕೊರಟಗೆರೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಬೊಮ್ಮನಹಳ್ಳಿ ನಿವಾಸಿ ವಿಜಯ್ ಬಂಧಿತ ಆರೋಪಿ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಗಟ್ಟಲಹಳ್ಳಿ ಕೆರೆಯ ಬಳಿ ಅಕ್ರಮ ಮರಳು ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ಕಾರ್ಯಾಚರಣೆ ನಡೆಸಿದ ಕೊರಟಗೆರೆ ಪೊಲೀಸರು ಮೂರು ಲಾರಿ ಜೊತೆ ಒಂದು ಸ್ಕಾರ್ಪಿಯೋ ವಶಕ್ಕೆ ಪಡೆದು ಒಬ್ಬನನ್ನು ಬಂಧಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin