ಜೀವನದಲ್ಲಿ ಜಿಗುಪ್ಸೆಗೊಂಡು ವಿದ್ಯಾರ್ಥಿನಿ ನೇಣಿಗೆ ಶರಣು

ಈ ಸುದ್ದಿಯನ್ನು ಶೇರ್ ಮಾಡಿ

hanging -suicide

ಬಾಗೇಪಲ್ಲಿ, ಫೆ.15- ಜೀವನದಲ್ಲಿ ಜಿಗುಪ್ಸೆಗೊಂಡು ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಆದೇಪಲ್ಲಿ ಗ್ರಾಮದಲ್ಲಿ ನಡೆದಿದೆ.
ಸುಕನ್ಯ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಪಟ್ಟಣದ ನ್ಯಾಷನಲ್ ಕಾಲೇಜಿನಲ್ಲಿ ಓದುತ್ತಿದ್ದ ಸುಕನ್ಯ ಎಂದಿನಂತೆ ನಿನ್ನೆ ಕಾಲೇಜಿಗೆ ತೆರಳಿ ಸಂಜೆ ಮನೆಗೆ ವಾಪಸ್ ಬಂದು ರಾತ್ರಿ ಊಟ ಮಾಡಿ ತನ್ನ ಕೋಣೆಗೆ ತೆರಳಿ ಮಲಗಿ ಎಲ್ಲರೂ ಮುಗಿದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಇಂದು ಬೆಳಗ್ಗೆ ಎಷ್ಟು ಸಮಯವಾದರೂ ಕೋಣೆಯಿಂದ ಹೊರಗೆ ಬಾರದಿದ್ದಾಗ ಕೋಣೆ ಬಳಿ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin