ಪತ್ನಿಯನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದ ಪತಿರಾಯ..!

ಈ ಸುದ್ದಿಯನ್ನು ಶೇರ್ ಮಾಡಿ

Wife-Murder--v01

ನವದೆಹಲಿ,ಫೆ.15-ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದು ತುಂಡು ತುಂಡಾಗಿ ಕತ್ತರಿಸಿ ಮನೆಯಲ್ಲಿಯೇ ಶವವನ್ನು ಮೂರು ದಿನಗಳ ಕಾಲ ಇಟ್ಟುಕೊಂಡಿದ್ದ ಘಟನೆ ನಡೆದಿದೆ.
ಪೂರ್ವ ದೆಹಲಿಯಲ್ಲಿನ ಮಧುವಿಹಾರ ಪ್ರದೇಶದಲ್ಲಿ ತನ್ನ ಪತ್ನಿಯನ್ನು ಭೀಕರವಾಗಿ ಕೊಲೆಗೈದಿರುವ ಪತಿ ಶುಭೋದ್‍ಕುಮಾರ್(40)ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕಳೆದ ಮೂರು ದಿನದ ಹಿಂದೆಯೇ ಪತ್ನಿಯನ್ನು ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ತನ್ನ ಕೋಣೆಯಲ್ಲಿ ಇಟ್ಟುಕೊಂಡಿದ್ದ ಎನ್ನಲಾಗಿದೆ.
ಮೃತದೇಹದ ವಾಸನೆ ಹರಡುತ್ತಿದ್ದಂತೆ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಪತ್ನಿ ಮನೀಶಾ ಹಾಗೂ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಶುಬೋದ್‍ಕುಮಾರ್ ವಾಸವಿದ್ದುದಾಗಿ ತಿಳಿದುಬಂದಿದೆ. ಕೊಲೆಗೆ ಸಂಚು ರೂಪಿಸಿ ಮಕ್ಕಳಿಬ್ಬರನ್ನು ರಾಂಚಿಯಲ್ಲಿರುವ ಸಂಬಂಧಿಕರ ಮನೆಗೆ ಕಳುಹಿಸಿದ್ದ ಎಂದು ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin