ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ

ಈ ಸುದ್ದಿಯನ್ನು ಶೇರ್ ಮಾಡಿ

Vims-Bellary--01

ಬಳ್ಳಾರಿ,ಫೆ.15-ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು , ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಂಇಂದು ನಸುಕಿನ ಜಾವ ಆಸ್ಪತ್ರೆಯ ರೋಗಿಗಳ ಹಳೆಯ ವಾರ್ಡ್‍ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದೆ. ಕೂಡಲೇ ಸಿಬ್ಬಂದಿಗಳು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಆಸ್ಪತ್ರೆಯ ಹಳೆಯ ವಾರ್ಡ್ ಇದಾಗಿದ್ದರಿಂದ ರೋಗಿಗಳನ್ನು ಬೇರೆ ಕಡೆ ಸ್ಥಳಾಂತರಿಸಲಾಗಿತ್ತು. ಬೆಂಕಿ ಬಿದ್ದುದನ್ನು ಕಂಡು ಭಯಭೀತರಾಗಿ ಅಕ್ಕಪಕ್ಕದ ವಾರ್ಡ್‍ನ ರೋಗಿಗಳು ಮತ್ತು ಸಿಬ್ಬಂದಿ ಓಡಿದ್ದಾರೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin