ಸರಕಾರಿ ಶಾಲೆ ಎಂಬ ಬೇದಭಾವ ಬಿಡಿ :  ಶಿಕ್ಷಕ ವೃತ್ತಿ ಶ್ರೇಷ್ಠವಾದ ವೃತ್ತಿ

ಈ ಸುದ್ದಿಯನ್ನು ಶೇರ್ ಮಾಡಿ

5

ಗದಗ,ಫೆ.15- ಸರಕಾರಿ ಶಾಲೆ, ಖಾಸಗಿ ಶಾಲೆ ಎಂಬ ಬೇದಭಾವ ಬಿಟ್ಟು ಎಲ್ಲಿ ಮಾಡಿದರೂ ಶಿಕ್ಷಕ ವೃತ್ತಿ ಶ್ರೇಷ್ಠವಾದ ವೃತ್ತಿ ಎಂದು ತಿಳಿದು ಮಕ್ಕಳಿಗೆ ಶಿಕ್ಷಣ ಬೋಧನೆ ಮಾಡಬೇಕು ಎಂದು ಜಿ.ಪಂ. ಅಧ್ಯಕ್ಷ ವಾಸಣ್ಣ ಕುರಡಗಿ ಹೇಳಿದರು.ನಗರದ ಅಂಬೇಡ್ಕರ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಜಿಲ್ಲಾ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿ ಕನ್ನಡ ಶಾಲೆಯಲ್ಲಿ ಕನ್ನಡ ಮಾತ್ರ ಕಲಿಸು ತ್ತಿದ್ದಾರೆ. ಖಾಸಗಿ ಶಾಲೆಯಲ್ಲಿ ಇಂಗ್ಲೀಷ ಕಲಿಸುತ್ತಿದ್ದಾರೆ ಎಂಬುದನ್ನು ಬಿಟ್ಟು ಬೇರೇನು ಕಲಿಸುತ್ತಿಲ್ಲ. ಯಾವುದೇ ಶಾಲೆಯಾಗಲಿ ಸರಕಾರ ಕನ್ನಡವನ್ನು ಬೋಧನೆ ಮಾಡುವುದು ಕಡ್ಡಾಯವಾಗಬೇಕು ಎಂದು ತಿಳಿಸಿದರು.  ಸರಕಾರಿ ಶಾಲೆಯ ಶಿಕ್ಷಕರ ಬೋಧನೆಯು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಇರುತ್ತದೆ. ಮುಂದೆ ಅವರು ಸರಕಾರದ ಉನ್ನತ ಹುದ್ದೆಯನ್ನು ಪಡೆಯುತ್ತಾರೆ. ಸರಕಾರಿ ಶಾಲೆಯ ಶಿಕ್ಷಕರು ಸಹ ತಮ್ಮ ಮಕ್ಕಳನ್ನು ಸರಕಾರಿ ಶಾಲೆಯಲ್ಲಿ ಕಲಿಸಬೇಕು ಎಂದು ಅವರು ಕಿವಿ ಮಾತು ಹೇಳಿದರು.

ವಿ.ಎಂ. ಹಿರೇಮಠ ಮಾತನಾಡಿ ಸರಕಾರಿ ಶಾಲೆಯ ಶಿಕ್ಷಕರ ಭೋದನೆಯನ್ನು ಸರಳವಾಗಿ ಮಕ್ಕಳಿಗೆ ತಿಳಿಯುವಂತೆ ಉದಾಹರಣೆ ಮೂಲಕ ಬೋಧನೆ ಮಾಡುತ್ತಾರೆ ಎಂದರು.
ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ಪುಸ್ತಕ ಬಿಡುಗಡೆ ಮಾಡಿದರು. ಕಾರ್ಯ ಕ್ರಮದಲ್ಲಿ ಜಿಪಂ ಉಪಾಧ್ಯಕ್ಷೆ ರೂಪಾ ಅಂಗಡಿ, ಗದಗ ತಾಪಂ ಅಧ್ಯಕ್ಷ ರವಿ ಇನಾಮತಿ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಂಜುನಾಥ ಚವ್ಹಾಣ, ಗದಗ ಬಿಇಓ ಜಿ. ರುದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ, ಶಂಕರ ಹೂಗಾರ, ಎಂ.ಎ. ರಡ್ಡೇರ, ಡಿ.ಐ. ಅಸುಂಡಿ, ಎಸ್.ಎನ್. ಹುಂಗಿ, ಕಸಾಪ ಜಿಲ್ಲಾಧ್ಯಕ್ಷ ಶರಣು ಗೋಗೇರಿ, ಜಿಲ್ಲಾಧ್ಯಕ್ಷ ರವಿ ಗುಂಜೀಕರ, ಪ್ರಧಾನ ಕಾರ್ಯದರ್ಶಿ ಕೆ.ಎಫ್. ಹಳ್ಯಾಳ ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin