2016ನೇ ಸಾಲಿನಲ್ಲಿ ದೇಶದ ಐಎಸ್‍ಟಿಇ ಕರ್ನಾಟಕ ಅತ್ತ್ಯುತ್ತಮ ವಿಭಾಗಕ್ಕೆ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

chikkamangaluru
ಚಿಕ್ಕಮಗಳೂರು, ಫೆ.15- ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ಕರ್ನಾಟಕ ವಿಭಾಗ ನವದೆಹಲಿಯ ಕೇಂದ್ರ ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯಿಂದ 2016ನೇ ಸಾಲಿನಲ್ಲಿ ದೇಶದ ಅತ್ತ್ಯುತ್ತಮ ವಿಭಾಗವೆಂಬ ಪ್ರಶಸ್ತಿಗೆ ಭಾಜನವಾಗಿದೆ. ಪಂಜಾಬ್ ನ  ಲೂಧಿಯಾನದ ಗುಲ್ಜ್‍ರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ಸ್‍ನಲ್ಲಿ ಫೆ 10ರಿಂದ 12ರವರೆಗೆ ನಡೆದ 46ನೇ ಐಎಸ್‍ಟಿಇ ರಾಷ್ಟ್ರೀಯ ವಾರ್ಷಿಕ ಸಮ್ಮೇಳನದಲ್ಲಿ ಪದಕ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ.ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆ ಕರ್ನಾಟಕ ವಿಭಾಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಚಿಕ್ಕಮಗಳೂರು ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಿ.ಕೆ.ಸುಬ್ಬರಾಯರವರು ಪ್ರಶಸ್ತಿ ಪತ್ರ ಸ್ವೀಕರಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin