ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 100ಕ್ಕೂ ಹೆಚ್ಚು ಮಂದಿ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

100-Kiled

ಕರಾಚಿ. ಫೆ.17 : ಪಾಕಿಸ್ತಾನದಲ್ಲಿ ನಿನ್ನೆ ರಾತ್ರಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 100 ಕ್ಕೂ ಹೆಚ್ಚುಮಂದಿ ಸಾವನ್ನಪ್ಪಿ 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪಾಕಿಸ್ತಾನದ ಸೂಫಿ ದರ್ಗಾದ ಮೇಲೆ ಉಗ್ರರು ಅಟ್ಟಹಾಸ ಮೆರೆದಿದ್ದು, ಸಿಂಧ್ ಪ್ರಾಂತ್ಯದ ಸೆಹ್ವಾನ್ ನಲ್ಲಿರುವ ಲಾಲ್ ಶಹಭಾಝ್ ಖಲಂದರ್ ಹೆಸರಿನ ದರ್ಗಾದಲ್ಲಿ ಪ್ರತಿ ಗುರವಾರ ಜನರ ಸಂಖ್ಯೆ ಹೆಚ್ಚಾಗಿರುತ್ತದೆ. ಅಲ್ಲದೆ, ಧಮಲ್ ಎಂಬ ಸಾಂಪ್ರದಾಯಿಕ ನೃತ್ಯ ಕಾರ್ಯಕ್ರಮದ ಭಾಗವಾಗಿ ಅತೀ ಹೆಚ್ಚು ಸಂಖೆಯಲ್ಲಿ ಜನರು ಸೇರಿರುತ್ತಾರೆ. ಈ ವೇಳೆಯಲ್ಲಿ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಒಂದು ವಾರದ ಅವಧಿಯೊಳಗೆ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಐದನೇ ಆತ್ಮಾಹುತಿ ಬಾಂಬ್ ದಾಳಿ ಇದಾಗಿದ್ದು, ಮೊದಲಿಗೆ ಗ್ರೆನೇಡ್ ದಾಳಿ ನಡೆಸಿರುವ ಉಗ್ರರು ಬಳಿ ತಮ್ಮನ್ನು ಸ್ಫೋಟಿಸಿಕೊಂಡಿದ್ದಾರೆ. ದಾಳಿಯ ಹೊಣೆಯನ್ನು ಇಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.   ಮಹಿಳೆಯರಿಗಾಗಿ ಮೀಸಲಿರಿಸುತ್ತಿದ್ದ ಸ್ಥಳದಲ್ಲಿ ಪ್ರಬಲ ಬಾಂಬ್ ಸ್ಫೋಟಿಸಿದ್ದು. ಸಾವನ್ನಪ್ಪಿದ 100 ಜನರಲ್ಲಿ 30 ಮಕ್ಕಳು ಕೂಡಾ ಸೇರಿದ್ದಾರೆ. ಆತ್ಮಾಹುತಿ ದಾಳಿಯನ್ನು ವಿಶ್ವಸಂಸ್ಥೆ ಖಂಡಿಸಿದ್ದು, ಸಾವನ್ನಪ್ಪಿದ ಕುಟುಂಬಸ್ಥರ ಕುರಿತಂತೆ ಸಂತಾಪವನ್ನು ಸೂಚಿಸುತ್ತಿದ್ದೇವೆ. ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  go

Facebook Comments

Sri Raghav

Admin