26 ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ರೈತರ ಸಂಘ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

kurunuru-shanthakumar

ಬೆಂಗಳೂರು, ಫೆ.17- ಕೃಷಿ ಬೆಲೆ ಆಯೋಗ ನೀಡಿರುವ ವರದಿಯಂತೆ ರೈತರು ಬೆಳೆದ 26 ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಬೇಕೆಂದು ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ.  ಸುದ್ದಿಗೋಷ್ಠಿಯಲ್ಲಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹಾಗೂ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಮುಖಂಡರಾದ ನಾಗರಾಜ್, ಎಂ.ವಿ.ಕೃಷ್ಣ ಮಾತನಾಡಿದರು.  ಇಂದು ಮುಖ್ಯಮಂತ್ರಿಗಳು ಕರೆದಿದ್ದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ರೈತರ ಸಮಸ್ಯೆಗಳು, ಅದರ ನಿವಾರಣೆಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ನೋಟ್ ಬ್ಯಾನ್‍ನಿಂದಾಗಿ ರೈತರ ಸಮಸ್ಯೆ ದ್ವಿಗುಣಗೊಂಡಿದೆ. ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ಮನವಿ ಮಾಡಿದ್ದಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರ ಬಳಿಗೆ ರೈತರ ನಿಯೋಗ ಕೊಂಡೊಯ್ಯುವಂತೆ ಸಲ್ಲಿಸಿದ ಕೋರಿಕೆಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

26 ಬೆಳೆಗಳಿಗೆ ಈಗಾಗಲೇ ನೀಡುತ್ತಿರುವ ಬೆಂಬಲ ಬೆಲೆ ಕಡಿಮೆಯಾಗಿದ್ದು, ಸೂಕ್ತವಾದ ಬೆಲೆ ನೀಡಲು ಕೇಂದ್ರ ಕ್ರಮಕೈಗೊಳ್ಳುವವರೆಗೂ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನೀಡುವ ಮೂಲಕ ರೈತರ ಸಂಕಷ್ಟಕ್ಕೆ ನೆರವಾಗಬೇಕು ಎಂದರು.  ರೈತರ ಎಲ್ಲಾ ಸಮಸ್ಯೆಗಳ ಬಗ್ಗೆ ಹಾಗೂ ಕೃಷಿ ಬೆಲೆ ಆಯೋಗ ಶಿಫಾರಸು ಮಾಡಿರುವ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಇದೇ 18 ರಂದು ಗಾಂಭವನದಲ್ಲಿ ರಾಷ್ಟ್ರಮಟ್ಟದ ರೈತ ಮುಖಂಡರ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತಿ ನ್ಯಾಯಮೂರ್ತಿ ಗೋಪಾಲಗೌಡ ವಿಷಯ ಮಂಡನೆ ಮಾಡಲಿದ್ದಾರೆ ಎಂದು ವಿವರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin