ಅಶ್ಲೀಲ ಸಿಡಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ : ಮೂವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಫೆ.18-ಅಶ್ಲೀಲ ಸಿಡಿಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ನಗರ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಜಗಮೋಹನ್ ಅರಮನೆ ರಸ್ತೆಯ ಫುಟ್‍ಪಾತ್‍ನಲ್ಲಿ ಜಯರಾಮ್ ಮತ್ತು ರಮೇಶ್ ಅವರು ಅಶ್ಲೀಲ ಸಿನಿಮಾಗಳ ಸಿಡಿಗಳನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ಬಂದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿ ಸಿಡಿಗಳನ್ನು ವಶಪಡಿಸಿಕೊಂಡಿದ್ದಾರೆ. ಲಕ್ಷರ್ ಪೊಲೀಸ್ ಠಾಣೆಯ ವ್ಯಾಪ್ತಿಯ ಕೆಪಿಸ್ಟ್ರೀಟ್‍ನ ಫುಟ್‍ಪಾತ್‍ನಲ್ಲಿ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಆರೋಪಿ ಸ್ವಾಮಿ ಎಂಬಾತನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಆಯಾ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin