ಕಾರಿಗೆ ಕಂಟೈನರ್ ಲಾರಿ ಡಿಕ್ಕಿ, ದಂಪತಿ ಮತ್ತು ಮಗು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--02

ಉತ್ತರಕನ್ನಡ.ಫೆ.20– ಕಂಟೈನರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ಮಗು ಸೇರಿ ಮೂವರು ದುರ್ಮರಣಕ್ಕೀಡಾಗಿರುವ ಘಟನೆ ಖಾನಾಪುರ ಬಳಿ ಸಂಭವಿಸಿದೆ. ಬೆಳಗಾವಿಯಿಂದ ಗೋವಾಕ್ಕೆ ಹೊರಟ್ಟಿದ್ದ ಮೂಲತಃ ಧಾರವಾಡ ತಾಲ್ಲೂಕಿನ ದುಮ್ಮವಾಡದ ಮಂಜುನಾಥ ಬಾನೇರಾ(35), ಪತ್ನಿ ಪವಿತ್ರ ಬಾನೇರಾ(30), ಪುತ್ರಿ ಸಮರ್ಥ ಬಾನೇರಾ(2) ಮೃತಪಟ್ಟ ದುರ್ದೈವಿಗಳು. ಬೆಳಗಾವಿಯಿಂದ ಗೋವಾಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಂಟೈನರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.   ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin