ಮೈಸೂರಲ್ಲಿ ಹೊತ್ತಿ ಉರಿದ ಗ್ಯಾಸ್ ಸಿಲಿಂಡರ್, ತಪ್ಪಿತು ಭಾರೀ ಅನಾಹುತ

ಈ ಸುದ್ದಿಯನ್ನು ಶೇರ್ ಮಾಡಿ

Mysuru-Gas

ಮೈಸೂರು, ಫೆ.20-ನಗರದಲ್ಲಿ ನಡೆದ ಎರಡು ಪ್ರತ್ಯೇಕ ಅನಿಲ ಸೋರಿಕೆಯಿಂದ ಎರಡು ಕಡೆ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.  ವಿನಾಯಕ ನಗರದ 8ನೆ ಕ್ರಾಸ್ ನಿವಾಸಿ ಬಸವರಾಜ್ ಎಂಬುವರ ಮನೆಯಲ್ಲಿ ಇಂದು ಬೆಳಗ್ಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿದೆ. ಈ ಬಗ್ಗೆ ಬಸವರಾಜ್ ಅವರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ನಾಗರಾಜ ಅರಸ್ ನೇತೃತ್ವದ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಈ ಬಗ್ಗೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿವೇಕಾನಂದ ನಗರದ ಎಂ ಬ್ಲಾಕ್‍ನ ಮಹದೇವಯ್ಯ ಎಂಬುವರ ಮನೆಯಲ್ಲಿ ಸಂಭವಿಸಿದ ಮತ್ತೊಂದು ಪ್ರಕರಣದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ ದಿನಬಳಕೆ ವಸ್ತುಗಳು ಸುಟ್ಟು ಹೋಗಿದೆ.  ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin