ಯಾದಗಿರಿ ಬಳಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ 9 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

accident

ಯಾದಗಿರಿ. ಫೆ.20 : ಯಾದಗಿರಿ ತಾಲ್ಲೂಕಿನ ರಾಮಸಮುದ್ರ ಗ್ರಾಮದ ಸಮೀಪ, ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟೆಂಪೋಗೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 9 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಇನ್ನೂ ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.  ಮೃತರು ಡಣಾಪುರ ಗ್ರಾಮದವರಾಗಿದ್ದು, ಶಹಾಪುರದಿಂದ ಎಂಗೇಜ್ ಮೆಂಟ್ ಮುಗಿಸಿಕೊಂಡು ಗ್ರಾಮಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹೈದರಾಬಾದ್ ನಿಂದ ವಾಡಿ ಪಟ್ಟಣಕ್ಕೆ ತೆರಳುತ್ತಿ ಟ್ಯಾಂಕರ್ ಟೆಂಪೋ ಗೆ ಡಿಕ್ಕಿ ಹೊಡೆದಿದೆ. ಈ ಸಂಬಂಧ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin