ವಿಶ್ವಾಸ ಮತಯಾಚನೆ ವೇಳೆ ಹಲ್ಲೆ ಖಂಡಿಸಿ ಫೆ.22ರಂದು ತಮಿಳುನಾಡಿನಾದ್ಯಂತ ಡಿಎಂಕೆ ನಿರಶನ

ಈ ಸುದ್ದಿಯನ್ನು ಶೇರ್ ಮಾಡಿ

DMK--01

ಚೆನ್ನೈ, ಫೆ.20-ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ತಮ್ಮ ಪಕ್ಷದ ಶಾಸಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಫೆ.22ರಂದು ಡಿಎಂಕೆ ರಾಜ್ಯದಾದ್ಯಂತ ಉಪವಾಸ ಸತ್ಯಾಗ್ರಹ ನಡೆಸಲಿದೆ.   ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಂದು ನಿರಶನ ನಡೆಸಿ ಎಐಎಡಿಎಂಕೆ ಶಾಸಕರ ದಬ್ಬಾಳಿಕೆಯನ್ನು ಖಂಡಿಸುವುದಾಗಿ ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.  ಇದೇ ಕಾರಣಕ್ಕಾಗಿ ಮರೀನಾ ಬೀಚ್‍ನಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಸ್ಟಾಲಿನ್, ಪಕ್ಷದ ಶಾಸಕರು, ಸಂಸದರು ಮತ್ತು 2000ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ವಿಶ್ವಾಸಮತ ಯಾಚನೆ ವೇಳೆ ಗೌಪ್ಯ ಮತದಾನಕ್ಕೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಡಿಎಂಪಿ ವಿಧಾನಸಭೆಯಲ್ಲಿ ಅಗ್ರಹಿಸಿತ್ತು. ಈ ಸಂದರ್ಭದಲ್ಲಿ ಉಂಟಾದ ಗದ್ದಲದಲ್ಲಿ ತಮ್ಮ ಮತ್ತು ತಮ್ಮ ಶಾಸಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಡಿಎಂಕೆ ರಾಜ್ಯದಾದ್ಯಂತಪ್ರತಿಭಟನೆ-ಧರಣಿ ಮುಂದುವರಿಸಲು ನಿರ್ಧರಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin