ಕಿಮ್ ಜಾಂಗ್ ನಮ್ ಹತ್ಯೆ : ಉತ್ತರ ಕೊರಿಯಾ ರಾಜತಾಂತ್ರಿಕನ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

Kim-Jong-nam

ಕೌಲಾಲಂಪುರ್, ಫೆ.22-ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಮಲ ಸಹೋದರ ಕಿಮ್ ಜಾಂಗ್ ನಮ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪತ್ತೆದಾರರು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಈ ಪ್ರಕರಣದ ಸಂಬಂಧ ಉತ್ತರ ಕೊರಿಯಾ ರಾಜತಾಂತ್ರಿಕರೊಬ್ಬರನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ಮಲೇಷ್ಯಾದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   ಕೌಲಾಲಂಪೂರ್ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ನಡೆದ ನಮ್ ಹತ್ಯೆ ಪ್ರಕರಣದಲ್ಲಿ ಕಳೆದ ವಾರ ಉತ್ತರ ಕೊರಿಯಾದ ಐವರ ವಿರುದ್ಧ ತನಿಖಾದರರು ಆರೋಪ ದಾಖಲಿಸಿಕೊಂಡಿದ್ದರು. ಈ ಕೃತ್ಯದಲ್ಲಿ ಇನ್ನೂ ಕೆಲವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ಉತ್ತರ ಕೊರಿಯಾದ ರಾಜತಾಂತ್ರಿಕರೊಬ್ಬರು ತನಿಖೆ ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಇನ್ನೊಂದು ಮೂಲಗಳೂ ಸಹ ಖಚಿತಪಡಿಸಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin