ಬಿಎಂಟಿಸಿಗೆ ಮಾರ್ಚ್ ಅಂತ್ಯಕ್ಕೆ 1650 ಹೊಸ ಬಸ್‍ಗಳ ಸೇರ್ಪಡೆ

ಈ ಸುದ್ದಿಯನ್ನು ಶೇರ್ ಮಾಡಿ

BMTC--01

ಬೆಂಗಳೂರು,ಫೆ.23- ಮಾರ್ಚ್ ಅಂತ್ಯದ ವೇಳೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಹೊಸದಾಗಿ 1650 ಹೊಸ ಬಸ್‍ಗಳು ಸೇರ್ಪಡೆಯಾಗಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಸಾರಿಗೆ ಸಂಸ್ಥೆಗಳಿಗೆ ಮೂರು ಸಾವಿರ ಹೊಸ ಬಸ್ ಖರೀದಿಸಲು ಉದ್ದೇಶವಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು. 1650 ಬಸ್‍ಗಳಲ್ಲಿ 150 ವೋಲ್ವೊ ಬಸ್‍ಗಳು ಸೇರಿವೆ. ಹೊಸ ಬಸ್ ಸೇರ್ಪಡೆಯಿಂದ ಹಳೆ ಬಸ್‍ಗಳನ್ನು ಸ್ಥಗಿತಗೊಳಿಸಲಾಗುವುದು. ನರ್ಮ್ ಯೋಜನೆಯಡಿ ಸಕಾಲದಲ್ಲಿ ಬಸ್‍ಗಳ ಖರೀದಿ ಸಾಧ್ಯವಾಗಿಲ್ಲ. ಹಾಗಾಗಿ ರಾಜ್ಯ ಸರ್ಕಾರದಿಂದಲೇ ಹೊಸ ಬಸ್‍ಗಳನ್ನು ಖರೀದಿಸಲಾಗುವುದು ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin