ಶಾಸಕ ಶಿವರಾಮ್ ಹೆಬ್ಬಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಈ ಸುದ್ದಿಯನ್ನು ಶೇರ್ ಮಾಡಿ

Car-Accident

ಯಲ್ಲಾಪುರ. ಫೆ.23 : ಯಲ್ಲಾಪುರ-ಮುಂಡಗೋಡ ಶಾಸಕ ಶಿವರಾಮ್ ಹೆಬ್ಬಾರ್ ಪ್ರಯಾಣಿಸುತ್ತಿದ್ದ ಕಾರು ಯಲ್ಲಾಪುರದ ಹುಣಶೆಟ್ಟಿಕೊಪ್ಪ ಬಳಿ ಅಪಘಾತಕ್ಕೀಡಾಗಿದೆ. ಬೆಂಗಳೂರಿನಿಂದ ಯಲ್ಲಾಪುರಕ್ಕೆ ಬರುವ ವೇಳೆ ಈ ಘಟನೆ ಸಂಭವಿಸಿದೆ. ಸಿಂಗಲ್ ಲೈಟ್ ಹಾಕಿಕೊಂಡು ಬರುತ್ತಿದ್ದ ಟ್ರಾಕ್ಟರ್ ಗೆ ಶಾಸಕರ ಇನೋವಾ ಕಾರ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಅಪಾಯಗಳಾಗಿಲ್ಲ.

ಅಪಘಾತ ನಡೆದ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ದೌಡಾಯಿಸಿ ಪರಿಶೀಲಿಸಿದರು. ಘಟನೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಶಿವರಾಮ್ ಹೆಬ್ಬಾರ್ ಯಾರಿಗೂ ಅಪಾಯವಾಗಿಲ್ಲ, ಆತಂಕ ಪಡುವ ಅವಶ್ಯಕತೆಯಿಲ್ಲ ಎಂದಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin