ದೆಹಲಿಯಲ್ಲಿ ಸಿಲಿಂಡರ್ ಸ್ಫೋಟ : ಬೆಂಕಿ ನಂದಿಸುತ್ತಿದ್ದ ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Delhi-Blast

ನವದೆಹಲಿ, ಫೆ.24-ಅಡುಗೆ ಅನಿಲ ಸ್ಫೋಟಗೊಂಡು ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿ ಮೃತಪಟ್ಟು, ಕೆಲವರು ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಪಶ್ಚಿಮ ದೆಹಲಿಯ ವಿಕಾಸಪುರಿಯ ಲಾಲ್ ಮಾರ್ಕೆಟ್‍ನ ಅಂಗಡಿಯೊಂದರಲ್ಲಿ ಇಂದು ಮುಂಜಾನೆ 5.45ರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾಗ ಎಲ್‍ಪಿಜಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಮೃತಪಟ್ಟು, ಕೆಲವರು ಗಾಯಗೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಹರಿಸಿಂಗ್ ಮೀನಾ ಮತ್ತು ಹರಿ ಓಂ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಗಾಯಾಳುಗಳಲ್ಲಿ ನವೀನ್ ಮತ್ತು ರವೀಂದ್ರ ಸಿಂಗ್ ಎಂಬುವರ ಸ್ಥಿತಿ ಚಿಂತಾಜನಕವಾಗಿದೆ.

ಕಳೆದ ವರ್ಷ ಏಪ್ರಿಲ್‍ನಲ್ಲಿ ದಕ್ಷಿಣ ದೆಹಲಿಯಲ್ಲಿ ಎರಡು ಕಡೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟು, 31ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin