ಮಹಾಶಿವರಾತ್ರಿ ಪ್ರಯುಕ್ತ ಮೈಸೂರಿನೆಲ್ಲೆಡೆ ಶಿವನಿಗೆ ವಿಶೇಷ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

shivappa

ಮೈಸೂರು,ಫೆ.24- ಮಹಾಶಿವರಾತ್ರಿ ಪ್ರಯುಕ್ತ ನಗರದ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ನಗರದ ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿರುವ ಶಿವನ ದೇವಾಲಯದಲ್ಲಿ ಸಾವಿರಾರು ಭಕ್ತರು ಸಾಲುಗಟ್ಟಿ ವಿಶೇಷ ಪೂಜೆ ಸಲ್ಲಿಸಿದರು. ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯದಲ್ಲಿ ಇಂದು ಬೆಳಗ್ಗಿನಿಂದಲೇ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಗಳು ನಡೆಯಿತು. 11 ಕೆಜಿ ತೂಕದ ಚಿನ್ನದ ಕೊಳಗವನ್ನು ಶಿವಲಿಂಗಕ್ಕೆ ಅರ್ಪಿಸಲಾಯಿತು.

ಈ ಚಿನ್ನದ ಕೊಳಗದಲ್ಲಿ ಶಿವನ ಮುಖವಾಡವಿದ್ದು , ತಲೆ ಮೇಲೆ ಗಂಗೆ ಮುತ್ತಿನ ಎರಡು ಲೋಲಾಕ್‍ಗಳು, ಪಚ್ಚೆಕಲ್ಲಿನ ಮೂಗುತಿ, ತಾಟಕ ಹಾಗೂ ಬೆಳ್ಳಿಯ ಅರ್ಧಚಂದ್ರವಿದ್ದು, ಇದನ್ನು ವರ್ಷಕ್ಕೊಮ್ಮೆ ಶಿವರಾತ್ರಿಯಲ್ಲಿ ಮಾತ್ರ ಶಿವನಿಗೆ ಧರಿಸಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರು ಈ ತ್ರಿನೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.  ರಾಮಾನುಜ ರಸ್ತೆಯಲ್ಲಿರುವ ಗುರುಕುಲದಲ್ಲಿನ 108 ಶಿವಲಿಂಗಗಳಿಗೆ ಪೂಜೆ ಸಲ್ಲಿಸಲಾಯಿತು. ದೇವಾಲಯದ ಎದುರಿನಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಕಾಮೇಶ್ವರ-ಕಾಮೇಶ್ವರಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ಪೂಜೆ ಸಲ್ಲಿಸಲಾಗುತ್ತಿದ್ದು , ಸಾವಿರಾರು ಭಕ್ತರು ಸಾಲುಗಟ್ಟಿ ನಿಂತು ದರ್ಶನ ಪಡೆದರು. ಇಂದು ಬೆಳಗ್ಗೆಯಿಂದ ನಾಳೆ ಬೆಳಗಿನ ಜಾವದವರೆಗೂ ನಗರದ ಎಲ್ಲಾ ಶಿವನ ದೇವಾಲಯಗಳ ವಿಶೇಷ ಪೂಜೆ ನಡೆಯಲಿದ್ದು , ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಬಿಗಿಬಂದೋಬಸ್ತ್ ಮಾಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin