ಯಡಿಯೂರಪ್ಪ, ಅಮಿತ್ ಷಾರಿಂದ ಡೈರಿ ಷಡ್ಯಂತ್ರ : ಪೂಜಾರಿ ವಾಗ್ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

pujari

ಮಂಗಳೂರು, ಫೆ.24- ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಡೈರಿಯ ಷಡ್ಯಂತ್ರ ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ. ಸದಾ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ವಿರುದ್ಧ ಕಿಡಿಕಾರುತ್ತಿದ್ದ ಜನಾರ್ದನಪೂಜಾರಿ ಇಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.   ನಿಮಗೆ ತಾಕತ್ತಿದ್ದರೆ ಸಂಜೆಯೊಳಗೆ ಡೈರಿ ವಿವರಗಳನ್ನು ಜನತೆಯ ಮುಂದಿಡಿ ಎಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಸವಾಲು ಹಾಕಿದ್ದಾರೆ.  ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಕಪ್ಪ ಕಾಣಿಕೆ ಸಲ್ಲಿಸುವ ಪಕ್ಷವಲ್ಲ.

ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ರೂಪಿಸಿರುವ ಷಡ್ಯಂತ್ರ ಇದಾಗಿದೆ ಎಂದು ಅವರು ಹೇಳಿದ್ದಾರೆ.  ಬಿ.ಎಸ್.ಯಡಿಯೂರಪ್ಪ ಅವರೇ ಈ ಡೈರಿಯನ್ನು ಸೃಷ್ಟಿ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆಸಿದ್ದಾರೆ ಎಂದು ಅವರು ಹೇಳಿದರು.  ಐಟಿ ದಾಳಿ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಿಕ್ಕಿದೆ ಎನ್ನಲಾದ ಡೈರಿ ನಿಮ್ಮ ಕೈಗೆ ಹೇಗೆ ಬಂತು? ಎಂದು ಪ್ರಶ್ನಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin