ಶೋಪಿಯಾನ್ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಸೇನಾ ಮುಖ್ಯಸ್ಥರ ಶ್ರದ್ಧಾಂಜಲಿ

ಈ ಸುದ್ದಿಯನ್ನು ಶೇರ್ ಮಾಡಿ

Bipin--01

ಶ್ರೀನಗರ, ಫೆ.24-ಕಾಶ್ಮೀರ ಕಣಿವೆಯ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾ ಗಸ್ತು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಮೂವರು ಯೋಧರಿಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಇಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸೇನಾ ಮುಖ್ಯಸ್ಥರು ಇಂದು ಬೆಳಿಗ್ಗೆ ಇಲ್ಲಿಗೆ ಆಗಮಿಸಿ ಬಾದಾಮಿಬಾಗ್ ದಂಡುಪ್ರದೇಶದಲ್ಲಿ ಶೋಪಿಯಾನ್ ಹುತಾತ್ಮರಿಗೆ ಶ್ರದ್ಧಾಂಜಲಿ ಸಮರ್ಪಿಸಿದರು ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.   ವೀರಮರಣವನ್ನಪ್ಪಿದ ಮೂರು ಯೋಧರ ಪಾರ್ಥಿವ ಶರೀರವಿದ್ದ ಶವಪೆಟ್ಟಿಗೆಗಳಿಗೆ ಜನರಲ್ ರಾವತ್ ಪುಷ್ಪಾಂಜಲಿ ಸಲ್ಲಿಸಿದರು. ನಂತರ ಕಾಶ್ಮೀರ ಕಣಿವೆ ಮತ್ತು ಗಡಿ ನಿಯಂತ್ರಣ ರೇಖೆಯಲ್ಲಿ ಸಮಗ್ರ ಭದ್ರತಾ ವ್ಯವಸ್ಥೆಗಳನ್ನು ಪರಾಮರ್ಶಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin