ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

 

protest

ಮೈಸೂರು, ಫೆ.24-ವಿಧಾನಪರಿಷತ್ ಸದಸ್ಯ ಗೋವಿಂದರಾಜು ಅವರ ನಿವಾಸದಲ್ಲಿ ಸಿಕ್ಕಿರುವ ಡೈರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‍ಗೆ ಕಪ್ಪ ಕೊಟ್ಟಿರುವುದು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಮೈಸೂರು ಗ್ರಾಮಾಂತರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಜಯನಗರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನಿವಾಸದ ಮುಂದೆ ಆಲನಹಳ್ಳಿ ಮಹದೇವಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಒಂದು ಹಂತದಲ್ಲಿ ಗೇಟ್ ತಳ್ಳಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಇದಕ್ಕೆ ಪೊಲೀಸರು ಅವಕಾಶ ಕೊಡಲಿಲ್ಲ.

ಗೋವಿಂದರಾಜು ಅವರ ನಿವಾಸದಲ್ಲಿ ಸಿಕ್ಕಿರುವ ಡೈರಿಯಲ್ಲಿ ಸಿದ್ದರಾಮಯ್ಯ , ಡಾ.ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಕಾಂಗ್ರೆಸ್ ಸಚಿವರು, ಕೆಲ ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ ಹೈಕಮಾಂಡ್‍ಗೆ ಕೋಟಿ ಕೋಟಿ ಕಪ್ಪ ನೀಡಿರುವುದು ಬಹಿರಂಗಗೊಂಡಿದೆ. ಕೂಡಲೇ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಹಾಗೂ ಮಹದೇವಪ್ಪ ರಾಜೀನಾಮೆ ನೀಡಬೇಕೆಂದು ಕಾರ್ಯಕರ್ತರು ಆಗ್ರಹಿಸಿದರು.ಪ್ರತಿಭಟನೆ ಹಿನ್ನೆಲೆಯಲ್ಲಿ ಮಹದೇವಪ್ಪ ನಿವಾಸದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin