ಸಂಬಂಧಿಕರ ನಡುವೆ ಮಾರಾಮಾರಿ : ಓರ್ವ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಚಾಮರಾಜನಗರ, ಫೆ.25-ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ನಡೆದ ಮಾರಾಮಾರಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ತಮ್ಮಡಿಹಳ್ಳಿಯ ಮಹದೇವನಾಯ್ಕ (35) ಮೃತ ದುರ್ದೈವಿ.ಸಂಬಂಧಿಕರಾದ ಬಸವರಾಜನಾಯ್ಕ ಮತ್ತು ಮಹದೇವನಾಯ್ಕ ನಡುವೆ ರಾತ್ರಿ 11 ಗಂಟೆ ಸಮಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ.ಈ ವೇಳೆ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದು, ಬಸವರಾಜನಾಯ್ಕ ದೊಣ್ಣೆಯಿಂದ ಕೊಟ್ಟ ಏಟಿಗೆ ಮಹದೇವ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಆರೋಪಿ ಅಲ್ಲಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಶೋಧ ಆರಂಭಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin