ಸಂಸದೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಕಿಕ್ ಔಟ್..?

ಈ ಸುದ್ದಿಯನ್ನು ಶೇರ್ ಮಾಡಿ

Govindaraju--01

ಬೆಂಗಳೂರು, ಫೆ.26-ವಿಧಾನಪರಿಷತ್ ಸದಸ್ಯ ಗೋವಿಂದರಾಜು ಅವರನ್ನು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹುದ್ದೆಯಿಂದ ಕೈ ಬಿಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ದಿಗ್ವಿಜಯ್ ಸಿಂಗ್ ಸೂಚಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ದ್ವಿಗ್ವಿಜಯ್, ಡೈರಿ ಪ್ರಕರಣ ಬೆಳಕಿಗೆ ಬಂದ ಕೂಡಲೇ ಕ್ರಮ ತೆಗೆದುಕೊಳ್ಳಬೇಕಾಗಿತ್ತು.

ಆರಂಭದಲ್ಲೇ ನಿರ್ಲಕ್ಷ್ಯ ವಹಿಸಿದ್ದರಿಂದ ಅದು ಈಗ ದೊಡ್ಡದಾಗಿದೆ ಎಂದು ಹೇಳಿದರು.   ಬಿಜೆಪಿಯವರು ಇದನ್ನೇ ದೊಡ್ಡದು ಮಾಡಿದ್ದಾರೆ. ಈ ರೀತಿಯ ವಿಷಯ ಗೊತ್ತಾದ ಕೂಡಲೇ ಗೋವಿಂದರಾಜು ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರೆಸಿದ್ದು ಏಕೆ? ಆರಂಭದಲ್ಲೇ ಸೂಚನೆ ಕೊಟ್ಟು ಕ್ರಮ ಕೈಗೊಂಡಿದ್ದರೆ ಇಷ್ಟು ದೊಡ್ಡದಾಗುತ್ತಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಕೀಯದಲ್ಲಿ ಯಾವುದು, ಎಷ್ಟನ್ನು ಗೌಪ್ಯವಾಗಿಡಬೇಕೆಂಬುದು ಗೋವಿಂದರಾಜುಗೆ ಗೊತ್ತಿಲ್ಲ. ಈಗಲಾದರೂ ಅವರನ್ನು ಸಂಸದೀಯ ಕಾರ್ಯದರ್ಶಿ ಸ್ಥಾನದಿಂದ ಕೈಬಿಡಿ. ಈಗಾಗಲೇ ಪಕ್ಷಕ್ಕೆ ಬಹಳಷ್ಟು ಹಾನಿಯಾಗಿದೆ ಇನ್ನಾದರೂ ಎಚ್ಚೆತ್ತುಕೊಳ್ಳಿ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.   ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಕಾರ್ಯದರ್ಶಿಗಳಾದ ಚಲ್ಲಕುಮಾರ್ , ಶಾಂತರಾಮ ನಾಯಕ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ ಧರ್ಮಸಿಂಗ್, ಮುಖಂಡರಾದ ಕೆ.ಎಚ್.ಮುನಿಯಪ್ಪ, ಸಿ.ಎಂ.ಇಬ್ರಾಹಿಂ, ಮಾರ್ಗರೇಟ್ ಆಳ್ವ, ಸಚಿವರಾದ ಕೆ.ಜೆ.ಜಾರ್ಜ್, ರೋಷನ್ ಬೇಗ್, ಡಿ.ಕೆ.ಶಿವಕುಮಾರ್ ಹಾಗೂ ಎನ್‍ಎಸ್‍ಯುಐ ಅಧ್ಯಕ್ಷ ಮಂಜುನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರರು ಪಾಲ್ಗೊಂಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin