35 ಚೀಲಗಳಲ್ಲಿ ಸಾಗಿಸಲಾಗುತ್ತಿದ್ದ ಅಪರೂಪದ 1,500 ಆಮೆಗಳು ವಶ, ಮೂವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Rare-verigty

ಮಾಲ್ಡಾ, ಫೆ.26- ರೈಲಿನಲ್ಲಿ ಕಳ್ಳಸಾಗಣೆಯಾಗುತ್ತಿದ್ದ  ಅಪರೂಪದ 1,500 ಆಮೆಗಳನ್ನು ಪಶ್ಚಿಮಬಂಗಾಳದ ಮಾಲ್ಡಾ ರೈಲು ನಿಲ್ದಾಣದಲ್ಲಿ ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ರೈಲ್ವೆ ರಕ್ಷಣಾ ಪಡೆ (ಆರ್‍ಎಎಫ್) ಪೊಲೀಸರು ತಮಗೆ ದೊರೆತ ಖಚಿತ ಸುಳಿವಿನ ಮೇರೆಗೆ ಮಾಲ್ಡಾ ರೈಲು ನಿಲ್ಣಾಣದಲ್ಲಿ ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ 35 ಚೀಲಗಳಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 1500ಕ್ಕೂ ಹೆಚ್ಚು ಆಮೆಗಳು ಪತ್ತೆಯಾದವು. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಆಮೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗೆ ಒಪ್ಪಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin