ಕಾಂಗ್ರೆಸ್ ಬಿಟ್ಟು ಬಿಜೆಪಿ ಕಡೆ ಹೊರಟ ಕುಮಾರ್ ಬಂಗಾರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Kumar-Bangarappa--02

ಬೆಂಗಳೂರು,ಫೆ.27-ನನ್ನ ಕ್ಷೇತ್ರದ ಕಾರ್ಯಕರ್ತರ ಒತ್ತಾಸೆಯಂತೆ ಶೀಘ್ರದಲ್ಲೇ ರಾಜಕೀಯ ನಿರ್ಧಾರವನ್ನು ಪ್ರಕಟಿಸುತ್ತೇನೆ ಎನ್ನುವ ಮೂಲಕ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.   ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟುಹಬ್ಬದ ಪ್ರಯುಕ್ತ ಶುಭಕೋರಲು ಅವರ ನಿವಾಸಕ್ಕೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ಪತ್ರಿಕಾಗೋಷ್ಠಿ ಕರೆದು ನನ್ನ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ. ಕ್ಷೇತ್ರದ ಜನತೆ ಹಾಗೂ ಎಲ್ಲರ ಕೋರಿಕೆಯಂತೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ಬಿಜೆಪಿ ಸೇರ್ಪಡೆಯಾಗಲಿದ್ದೀರ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವೇ ದಿನಗಳಲ್ಲಿ ಕಾದು ನೋಡಿ. ನನ್ನ ನಿರ್ಧಾರ ಏನೆಂಬುದು ಬಹಿರಂಗವಾಗುತ್ತದೆ. ಇನ್ನು ವಿಳಂಬ ಮಾಡುವುದರಲ್ಲಿ ಅರ್ಥವಿಲ್ಲ ಎಂದರು.   ಆದರೆ ಮಾತಿನುದ್ದಕ್ಕೂ ಯಡಿಯೂರಪ್ಪ ಹಾಗೂ ಅವರ ನಾಯಕತ್ವವನ್ನು ಗುಣಗಾನ ಮಾಡುವ ಮೂಲಕ ಕಾಂಗ್ರೆಸ್‍ಗೆ ಕೈಕೊಟ್ಟು ಬಿಜೆಪಿ ಸೇರಲು ಸಿದ್ದ ಎಂಬ ಸಂದೇಶವನ್ನು ಕುಮಾರ್ ಬಂಗಾರಪ್ಪ ರವಾನಿಸಿದರು.   ಯಡಿಯೂರಪ್ಪ ನಮ್ಮ ಜಿಲ್ಲೆಯ ಅತ್ಯಂತ ಪ್ರಭಾವಿ ನಾಯಕರು. ಅವರ ಅಧಿಕಾರಾವಧಿಯಲ್ಲಿ ರಾಜ್ಯ ಹಾಗೂ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಕಂಡಿದೆ. ರಾಷ್ಟ್ರ ರಾಜಕಾರಣದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಮ್ಮಂತ ಯುವಕರು ಅವರ ಕೈ ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.

ಬಿಜೆಪಿ ಸೇರ್ಪಡೆ ಕುರಿತಂತೆ ಈಗಾಗಲೇ ಕ್ಷೇತ್ರದ ಜನತೆಯ ಅಭಿಪ್ರಾಯವನ್ನು ಪಡೆದಿದ್ದೇನೆ. ಸೂಕ್ತವಾದ ನಿರ್ಧಾರ ಕೈಗೊಳ್ಳುವಂತೆ ಸಲಹೆ ಮಾಡಿದ್ದಾರೆ. ನಾನು ಈ ಹಿಂದೆ ಪ್ರತಿನಿಧಿಸುತ್ತಿದ್ದ ರಾಜಕೀಯ ಪಕ್ಷದಲ್ಲಿ ಅನೇಕ ಗೊಂದಲಗಳಿರುವುದರಿಂದ ಬದಲಾವಣೆ ಅನಿವಾರ್ಯ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin