ಲಾರಿಗೆ ಕಾರು ಡಿಕ್ಕಿ : ದಂಪತಿಗಳ ಸಾವು 

ಈ ಸುದ್ದಿಯನ್ನು ಶೇರ್ ಮಾಡಿ

ಕಲಘಟಗಿ,ಫೆ.28- ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ದಂಪತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ತಂಬೂರ ಕ್ರಾಸ್ ಬಳಿ ಹುಬ್ಬಳ್ಳಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಜರುಗಿದೆ. ಕುವಟಾ ತಾಲೂಕಿನ ಬಗ್ಗೋಣ ನಿವಾಸಿ ಕಾರು ಚಾಲಕ ವಿಠಲ ಹರಿಶ್ಚಂದ್ರ ವಾಳ್ಕೆ (45) ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರೂಪಾ ವಿಠಲ ವಾಳ್ಕೆ (35) ತೀವ್ರ ಗಾಯಗೊಂಡು ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್‍ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯಲ್ಲಾಪೂರ ಕಡೆಯಿಂದ ಹುಬ್ಬಳ್ಳಿಗೆ ಹೋಗುವಾಗ ಲಾರಿಗೆ ಕಾರು ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಪಿಎಸ್‍ಐ ಪರಮೇಶ್ವರ ಕವಟಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin