ನಾಳೆ ಮಣಿಪುರದಲ್ಲಿ ಮೊದಲ ಹಂತದ ಚುನಾವಣೆ

ಈ ಸುದ್ದಿಯನ್ನು ಶೇರ್ ಮಾಡಿ

Voting--01

ಇಂಫಾಲ, ಮಾ.3-ಈಶಾನ್ಯ ರಾಜ್ಯ ಮಣಿಪುರದಲ್ಲಿ ನಾಳೆ ಮೊದಲ ಹಂತದ ವಿಧಾನಸಭೆ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಶಾಂತಿಯುತ ಮತದಾನಕ್ಕಾಗಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ನಾಳೆ ಐದು ಜಿಲ್ಲೆಗಳ 38 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, 1,643 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 168 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 19,02,562 ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಈಶಾನ್ಯ ಭಾರತದ ರಾಜ್ಯದಲ್ಲಿ ನಾಳೆ ನಡೆಯುವ ಮತದಾನದ ವೇಳೆ ಬಂಡುಕೋರರಿಂದ ಅಡಚಣೆಯಾಗುವುದನ್ನು ತಪ್ಪಿಸಲು ಬಿಗಿ ಭದ್ರತಾ ಏರ್ಪಾಡುಗಳನ್ನು ಮಾಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin