ಸೊರಬದಲ್ಲಿ ಪಕ್ಷಾಂತರ ಪರ್ವ ವಿರೋಧಿಸಿ ಕಾಂಗ್ರೆಸ್ ಪದಾಧಿಕಾರಿಗಳ ರಾಜೀನಾಮೆ

ಈ ಸುದ್ದಿಯನ್ನು ಶೇರ್ ಮಾಡಿ

Madhu-and-Kumar-Bangarappa-

ಶಿವಮೊಗ್ಗ, ಮಾ.3- ಜಿಲ್ಲಾ ಕಾಂಗ್ರೆಸ್‍ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಮಾಜಿ ಸಚಿವ ಕುಮಾರ್‍ಬಂಗಾರಪ್ಪ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವುದು ಜೆಡಿಎಸ್ ಶಾಸಕ ಮಧುಬಂಗಾರಪ್ಪ ಅವರನ್ನು ಕಾಂಗ್ರೆಸ್‍ಗೆ ಸೆಳೆಯಲು ಪ್ರಯತ್ನ ನಡೆಸುತ್ತಿರುವ ಕ್ರಮಕ್ಕೆ ಸೊರಬ ತಾಲ್ಲೂಕು ಕಾಂಗ್ರೆಸ್ ಘಟಕದಲ್ಲಿ ಅತೃಪ್ತಿ ಹೆಚ್ಚಾಗಿದೆ.  ಈ ಬೆಳವಣಿಗೆಗಳನ್ನು ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ ವಿವಿಧ ಸ್ತರದ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕುಮಾರ್‍ಬಂಗಾರಪ್ಪನವರ ಬಗ್ಗೆ ಲಘುವಾಗಿ ಮಾತನಾಡಿದ ಮಧುಬಂಗಾರಪ್ಪ ಅವರೇ ಕಾಂಗ್ರೆಸ್ ಮನೆ ಬಾಗಿಲು ಬಡಿಯುತ್ತಿದ್ದಾರೆ ಎಂದು ಬ್ಲಾಂಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಂ.ಉಮೇಶ್ ಟೀಕಿಸಿದ್ದಾರೆ. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಬಗರ್‍ಹುಕುಂ ಸಮಿತಿಯಲ್ಲಿದ್ದ ಕಾಂಗ್ರೆಸ್ ಸದಸ್ಯರನ್ನು ವಜಾಗೊಳಿಸಿ ಜೆಡಿಎಸ್ ಕಾರ್ಯಕರ್ತರನ್ನು ನೇಮಕ ಮಾಡಿದ್ದಾರೆ. ಸೊರಬ ತಾಲ್ಲೂಕಿನಲ್ಲಿ ಪಕ್ಷದ ಹಿನ್ನಡೆಗೆ ಕಾರಣರಾಗಿದ್ದಾರೆ.

ಕುಮಾರ್ ಬಂಗಾರಪ್ಪ ಅವರನ್ನು ರಾಜಕೀಯವಾಗಿ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಮುಖಂಡರ ವರ್ತನೆಯಿಂದ ಬೇಸತ್ತು ರಾಜೀನಾಮೆ ನೀಡಿದ್ದೇವೆ. ಮುಂದೆ ಪಕ್ಷವನ್ನು ತೊರೆದು ಕುಮಾರ್ ಬಂಗಾರಪ್ಪ ಅವರನ್ನು ಬೆಂಬಲಿಸಲಿದ್ದೇವೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin