ಹಳಿದಾಟಲು ಮುಂದಾದ ವ್ಯಕ್ತಿ  ರೈಲಿಗೆ ಸಿಲುಕಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Indian-Railway-01

ಮಂಡ್ಯ,ಫೆ.4- ಹಳಿದಾಟಲು ಮುಂದಾದ ವ್ಯಕ್ತಿ ಆಯತಪ್ಪಿ ಬಿದ್ದು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ಬಳಿ ಸಂಭವಿಸಿದೆ. ನಗರದ ಬಂದವಾಡಿ ನಿವಾಸಿ ಮಹೇಶ್(38) ಮೃತಪಟ್ಟ ದುರ್ದೈವಿ. ನಿನ್ನೆ ಈತ ರೈಲ್ವೆ ನಿಲ್ದಾಣ ಬಳಿ ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿ ರೈಲ್ವೆಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಮಂಡ್ಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin