ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-02

ಬೆಂಗಳೂರು, ಮಾ.5- ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.  ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ನಾಳೆ ಮನೆಗೆ ಮರಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಗುರುವಾರ ಸಂಜೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರದುರ್ಗ ಹಾಗೂ ಮೈಸೂರು ಜಿಲ್ಲೆಯಲ್ಲಿ ನಿರಂತರ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದರು. ಮೈಸೂರಿನಲ್ಲಿಯೇ ಜ್ವರ ಕಾಣಿಸಿಕೊಂಡಿದ್ದರಿಂದ ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರ ಆರೋಗ್ಯ ಉತ್ತಮವಾಗಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯರು ಸಲಹೆ ಮಾಡಿದ್ದಾರೆ. ಅದರಂತೆಯೇ ಕುಮಾರಸ್ವಾಮಿ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin