ಇನ್ನೂ ಮೂರು ದಿನ ಮೋಡ ಕವಿದ ವಾತಾವರಣ, ಸಾಧಾರಣ ಮಳೆ

ಈ ಸುದ್ದಿಯನ್ನು ಶೇರ್ ಮಾಡಿ

Rain-01

ಬೆಂಗಳೂರು, ಮಾ.6-ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಲಘು ವಾಯುಭಾರ ಕುಸಿತ, ಮೇಲ್ಮೈ ಸುಳಿಗಾಳಿ ಉಂಟಾಗಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇನ್ನೆರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ರಾಮನಗರ, ಕೊಡಗು ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಿರುವ ವರದಿಯಾಗಿದೆ.  ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಶ್ರೀನಿವಾಸ್‍ರೆಡ್ಡಿ ಪ್ರಕಾರ, ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇದೆ. ಬುಧವಾರದವರೆಗೆ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ತಜ್ಞ ವಿ.ಎಸ್.ಪ್ರಕಾಶ್ ಅವರು ಇನ್ನು ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ರಾಜ್ಯದ ದಕ್ಷಿಣ ಒಳನಾಡಿನ ಕೊಡಗು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ. ಆದರೆ ಭಾರೀ ಮಳೆಯಾಗುವ ಮುನ್ಸೂಚನೆ ಇಲ್ಲ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin